ಧಾರವಾಡ: ರಾತ್ರೋರಾತ್ರಿ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಚೈತನ್ಯನಗರ ಬಡಾವಣೆಯಲ್ಲಿ ನಡೆದಿದೆ.
ಚೈತನ್ಯನಗರದ ಚಿದಾನಂದ ಹೊಟ್ಟೆಪ್ಪನವರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು, ಮನೆಯಲ್ಲಿದ್ದ ಅಂದಾಜು 120 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಚಿದಾನಂದ ಅವರ ಕುಟುಂಬ ಕಳೆದ ಎರಡು ದಿನಗಳಿಂದ ಮನೆಯಲ್ಲಿರಲಿಲ್ಲ. ಇದೇ ಸಮಯ ನೋಡಿದ ಕಳ್ಳರು ಮನೆಯ ಕೀಲಿ ಮುರಿದು ಒಳನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





