Breaking News

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಧಾರವಾಡ: ದೆಹಲಿಯ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಎಐಯುಟಿಯುಸಿ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬ್ರಿಜ್ ಭೂಷಣ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ. ಸ್ವತಃ ಮಹಿಳಾ ಕುಸ್ತಿಪಟುಗಳೇ ಇದನ್ನು ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಮಹಿಳಾ ಕುಸ್ತಿಪಟುಗಳಿಗೆ ಭದ್ರತೆ ನೀಡಬೇಕು. ಈಗಾಗಲೇ ಬ್ರಿಜ್ ಭೂಷಣ್ ಅವರ ಮೇಲೆ ದೂರು ದಾಖಲಾಗಿದ್ದು, ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *