ಬೆಳಗಾವಿ: ರಾಜ್ಯದಲ್ಲಿ ಬಹುತಮದ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಈಗಾಗಲೇ ಗ್ಯಾರಂಟಿ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮವನ್ನು ಕೈಗೊಂಡಿದೆ. ಆದರೆ, ಸಂಪುಟದಲ್ಲಿ ಸ್ಥಾನ ಸಿಗದೇ ಇರೋದಕ್ಕೆ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ತಮ್ಮ ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ. ಈ ಸಲ ಸಹಜವಾಗಿ ಹೆಚ್ಚಿನ ಶಾಸಕರು ಆಯ್ಕೆ ಆಗಿದ್ದಾರೆ. ಅನೇಕರನ್ನು ಸಮಾಧಾನ ಮಾಡಲು ಹೋಗಿ ಸಚಿವ ಸ್ಥಾನ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದಿದ್ದಾರೆ.
ಈ ಬಾರಿ ಲಿಂಗಾಯತ ಸಮಾಜದ 37 ಶಾಸಕರು ಆಯ್ಕೆಯಾಗಿದ್ದಾರೆ. ಅಲ್ಲದೇ ಪಂಚಮಸಾಲಿ ಸಮಾಜದಲ್ಲಿ 13 ಜನ ಶಾಸಕರು ಆಯ್ಕೆಯಾಗಿದ್ದೇವೆ. ಸಮಾಜ ಕಟ್ಟುವ ಕೆಲಸ ಮಾಡಿರೋದನ್ನು ಪಕ್ಷ ಗಮನಿಸಬೇಕಿತ್ತು. ಆದರೆ, ಪಕ್ಷ ಇದನ್ನು ಗಮನಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





