Breaking News

ಪೋಲಿಸಗಿರಿಗೆ ಅವಕಾಶವಿಲ್ಲ ಸಿ.ಎಂ. ಖಡಕ್ ಸೂಚನೆ

ಬೆಂಗಳೂರು ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಅವಕಾಶವಿಲ್ಲ. ಈ ಸಂಬಂಧ ಎಲ್ಲ ಪೊಲೀಸ್‌ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಕರ್ನಾಟಕ ರಾಜ್ಯ ಹಜ್‌ ಸಮಿತಿ ಆಯೋಜಿಸಿದ್ದ 2023 ನೇ ಸಾಲಿನ ಹಜ್‌ ವಿಮಾನ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಕಾನೂನಿನ ಆಡಳಿತ ಜಾರಿಯಲ್ಲಿದೆ.ಇದು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಪ್ರತಿಯೊಂದು ಸಮುದಾಯದ ಸಹಭಾಗಿತ್ವ ಇದ್ದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ.

ನಮ್ಮ ಸರ್ಕಾರ ಸರ್ವರಿಗೂ ಸಮಪಾಲು ಎನ್ನುವ ಮೌಲ್ಯದಲ್ಲಿ ನಂಬಿಕೆ ಇಟ್ಟಿದೆ.ರಾಜ್ಯ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಕನ್ನಡ ನಾಡಿನ ಸಮಸ್ತರಿಗೆ ಅನ್ವಯ ಆಗುತ್ತದೆ. ಎಲ್ಲ ಧರ್ಮ, ಎಲ್ಲಾ ಜಾತಿ-ಸಮುದಾಯಗಳ ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಾರೆ ಎಂದರು. ನಮ್ಮ ನಾಡು ಮತ್ತು ನಮ್ಮ ದೇಶ ಸುಭಿಕ್ಷವಾಗಿ ಪ್ರಗತಿಯ ಮಾರ್ಗದಲ್ಲಿ ಸಾಗಬೇಕಿದೆ. ಈ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್‌ ಯಾತ್ರಿಗಳು ಪ್ರಾರ್ಥಿಸಿ ಎಂದು ಕೇಳಿಕೊಂಡರು.

ಈ ವೇಳೆ ಕಂದಾಯ ಸಚಿವ ಕೃಷ್ಣಬೈರೇಗೌಡ, ಸಚಿವ ರಹೀಂ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಮೀರೇ ಶರಿಯತ್‌ ಕರ್ನಾಟಕದ ಹಜರತ್‌ ಮೌಲಾನಾ ಸಗೀರ್‌ ಅಹಮದ್‌ ಖಾನ್‌ ರಶಾದಿ ಸಾಹೇಬ ಮತ್ತು ವಿಜಯಪುರದ ಅಲ್ ಹಶ್ಮಿ ಟ್ರಸ್ವ್‌ ಅಧ್ಯಕ್ಷರಾದ ಮೌಲಾನಾ ಮಫ್ತಿ ಇಫ್ತಿಕಾರ್‌ ಅಹಮದ್‌ ಖಶ್ಮಿ ಇದ್ದರು.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *