Breaking News

ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಲು ಮುಂದಾಗಿದ್ದಾರೆ ಸಚಿವರು…

ಬೆಳಗಾವಿ: ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರಕಾರದ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಅದನ್ನು ಸಮರ್ಪಕವಾಗಿ ನಡೆಸಿ. ಇನ್ನೂ ಎಲ್ಲೆಲ್ಲಿ ಸಾಧ್ಯವಿದೆ ಎಂದು ಪರಿಶೀಲಿಸಿ ಆದ್ಯತೆಯ ಮೇಲೆ ಆರಂಭಿಸಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬುಧವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಆರಂಭಿಸಲಾಗಿರುವ ಆರು ಇಂದಿರಾ ಕ್ಯಾಂಟೀನ್ ಗಳು‌ ಯಾವ ರೀತಿ ನಡೆಸಲಾಗುತ್ತದೆ ಎಂದು ಪ್ರಶ್ನಿಸಿದ ಅವರು, ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಜನರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು. ಹಿಂಡಲಗಾ, ವೈಭವ ನಗರ ಮತ್ತಿತರ ಕಡೆ ಕ್ಯಾಂಟೀನ್ ಆರಂಭಿಸಿ. ಮಹಿಳೆಯರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗಬೇಕು.

ಇನ್ನು ಮುಂದೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖೆಯ ಹೆಚ್ಚಾಗಲಿದ್ದು, ಅವರಿಗೆ ಸರಿಯಾಗಿ ಊಟ ಸಿಗುವಂತೆ ನೋಡಿಕೊಳ್ಳಿ. ನಾನು ಕುಟುಂಬ ಸಮೇತ ಅನೀರಿಕ್ಷಿತ ಭೇಟಿ ನೀಡುತ್ತೇನೆ, ಊಟವನ್ನೂ ಮಾಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ರಂಗ ಪಂಚಮಿ ಸಂಭ್ರಮಕ್ಕೆ ಸಜ್ಜು: ಸಂಗೀತ, ಡಿಜೆ ಡ್ಯಾನ್ಸ್ ಕಾರ್ಯಕ್ರಮ…

ರಂಗ ಪಂಚಮಿ ಅಂಗವಾಗಿ ಸ್ನೇಹಿತರಿಗಾಗಿ ವಿಶೇಷ ಡ್ಯಾನ್ಸ್ ಕಾರ್ಯಕ್ರಮ ಹುಬ್ಬಳ್ಳಿ: ರಂಗ ಪಂಚಮಿ ಹಬ್ಬದ ಅಂಗವಾಗಿ ಮಾರ್ಚ್ 6 ರಂದು …

Leave a Reply

Your email address will not be published. Required fields are marked *