ಧಾರವಾಡ ನವಲಗುಂದ: ನವಲಗುಂದ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಈ ಕೂಡಲೇ ಶಾಲಾವಾರು ಖಾಲಿ ಇರುವಂತಹ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕೆಂದು ಸಮಾಜ ಸೇವಕ ಮಾಬುಸಾಬ್ ಯರಗುಪ್ಪಿ ಒತ್ತಾಯಿಸಿದ್ದಾರೆ.
ಈ ಕುರಿತು ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ನೀಡಿ ಮಾತನಾಡಿದ ಮಾಬುಸಾಬ್ ಯರಗುಪ್ಪಿ ಅವರು, ಇವತ್ತು ತಾಲೂಕಿನಾದ್ಯಾಂತ 124 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿದ್ದು ಸರ್ಕಾರದಿಂದ ಮಂಜೂರಾದ ಹುದ್ದೆಗಳು 685. ಅದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತಹ ಶಿಕ್ಷಕರ ಹುದ್ದೆಗಳು 478 ಮಾತ್ರ. ಇನ್ನುಳಿದಂತೆ 207 ಶಿಕ್ಷಕರ ಕೊರತೆಯಿದ್ದು ಅದರಲ್ಲಿ ಸರ್ಕಾರದಿಂದ 91 ಅತಿಥಿ ಶಿಕ್ಷಕರ ಹುದ್ದೆ ಮಂಜೂರಾಗಿದ್ದು ಇನ್ನುಳಿದ ಅತಿಥಿ ಶಿಕ್ಷಕರನ್ನು ಈ ಕೂಡಲೇ ನೇಮಕ ಮಾಡಿ ಮಕ್ಕಳ ಶಿಕ್ಷಣಕ್ಕೆ ಅಡೆತಡೆಯಾಗದಂತೆ ನೋಡಿಕೊಳ್ಳಬೇಕೆಂದು ಮನವಿಯಲ್ಲಿ ಮಾಬುಸಾಬ ಯರಗುಪ್ಪಿ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




