ಧಾರವಾಡ: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರೂಪಾ ಸವದತ್ತಿ ಎಂಬುವವರೇ ಹತ್ಯೆಗೀಡಾದ ಮಹಿಳೆ ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ಮರಳಿ ಬಂದಿರಲಿಲ್ಲ. ಅವರಿಗಾಗಿ ಮನೆಯವರು ಶೋಧ ಕೂಡ ನಡೆಸಿದ್ದರು.
ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ.ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿಲ್ಲ.ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





