Breaking News

ಉತ್ತರ ಕರ್ನಾಟಕದ ಅಭಿವೃದ್ಧಿ ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಂದಾದ ಸಚಿವರು

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಮ್ಮನ ಗುಡ್ಡ, ಬನಶಂಕರಿ ಮತ್ತು ದುರ್ಗಮ್ಮ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಬರುತ್ತಾರೆ. ಇಂತಹ ಜನಸಾಮಾನ್ಯರ ಶ್ರದ್ಧಾ ಕೇಂದ್ರಗಳು ಪ್ರವಾಸಿ ತಾಣಗಳ ರೀತಿಯಲ್ಲೇ ಇವೆ. ಅವುಗಳ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದರು.
ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷ ಮಟ್ಟದಲ್ಲಿ ಆದ್ಯತೆ ಸಿಕ್ಕಿಲ್ಲ. ಅದಕ್ಕೆ ಹಲವು ಕಾರಣಳಿವೆ. ಇನ್ನು ಮುಂದೆ ಈ ರೀತಿ ಆಗದಂತೆ

ನೋಡಿಕೊಳ್ಳಲಾಗುವುದು ಎಂದು ಹೇಳಿದರು.ಶಾಸಕರ ಸೇವಾ ತಂಡವನ್ನು ಗದಗದಲ್ಲಿ ಸ್ಥಾಪಿಸಲಾಗಿದೆ. ಅದನ್ನು ನೋಂದಣಿ ಮಾಡಿ ಸಾಂಸ್ಥಿಕ ಸ್ವರೂಪ ನೀಡಲಾಗುವುದು ಎಂದು ತಿಳಿಸಿದರು.ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಶಾಂತಿ, ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಜನಸಾಮಾನ್ಯರ ಅಭಿಪ್ರಾಯ ಗಮನದಲ್ಲಿಟ್ಟುಕೊಂಡು ಕಾನೂನು ರೂಪಿಸಲಾಗುವುದು ಎಂದರು.

ಗೋಹತ್ಯೆ ನಿಷೇಧ, ಬಜರಂಗದಳ ನಿಷೇಧಕ್ಕೆ ಸಂಬಂಧಿಸಿದ ಯಾವುದೇ ಪ್ರಸ್ತಾವಗಳು ಸರ್ಕಾರದ ಮುಂದೆ ಇಲ್ಲ. ಇಂತಹ ಚರ್ಚೆಗಳು ಅನವಶ್ಯಕ ಎಂದು ಹೇಳಿದರು.ಎಪಿಎಂಸಿ ಕಾಯ್ದೆಗಳಿಗೆ ತಂದಿದ್ದ ತಿದ್ದುಪಡಿಯನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಎಪಿಎಂಸಿ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ವಾರದ ಒಳಗೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಉತ್ತರ ಕರ್ನಾಟಕ ಭಾಗದ ಮಾಮ್ಲೆ ದೇಸಾಯಿ, ಕೆ.ಎಚ್.ಪಾಟೀಲ, ಎಂಆರ್‌ಪಾಟೀಲ, ಬಿ.ಜಿ.ಬಣಕಾರ ಅವರು ಎಪಿಎಂಸಿಗಳ ಆರಂಭಕ್ಕೆ ವಿಶೇಷ ಪ್ರಯತ್ನ ಮಾಡಿದ್ದರು. ರೈತರ ಶೋಷಣೆ ತಡೆಗಟ್ಟುವ ಕೆಲಸ ಮಾಡಿದ್ದರು. ಅವರ ಕನಸಿಗೆ ಧಕ್ಕೆ ತರುವ ಯಾವುದೇ ಕಾನೂನು ಗಳನ್ನು ತೆಗೆದು ಹಾಕಲಾಗುವುದು ಎಂದು ಹೇಳಿದರು.

ಸಮಾಜ ಸುಧಾರಣೆ, ಆಡಳಿತದಲ್ಲಿ ಶಿಸ್ತು ತರುವುದು, ಜನಕಲ್ಯಾಣದ ದೃಷ್ಟಿಯಿಂದ ಮೊದಲ ಅಧಿವೇಶನದಲ್ಲಿ ಕೆಲವು ಕಾನೂನುಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು

Share News

About BigTv News

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *