ಧಾರವಾಡ : ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯದ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಎಸ್.ಎಫ್ ಸಿದ್ದನಗೌಡರ ಆಗ್ರಹಿಸಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ. ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಅದರಂತೆ ಏಳನೇ ವೇತನ ಆಯೋಗ ಜಾರಿ ಕುರಿತು ಶೀಘ್ರದಲ್ಲೇ ವರದಿ ತರಸಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈಗಾಗಲೇ ರಾಜ್ಯ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅವರು ಸಹ ಸರ್ಕಾರದ ಗಮನಕ್ಕೆ ಸರ್ಕಾರಿ ನೌಕರರ ಬೇಡಿಕೆ ಕುರಿತು ಮನವರಿಕೆ ಮಾಡಿದ್ದಾರೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಸರ್ಕಾರಿ ನೌಕರರ ಎಲ್ಲ ಬೇಡಿಕೆ ಈಡೇರಿಕೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





