ಒಂದು ಕಡೆ ಮಹಿಳೆಯರು ಖುಷಿಯಿಂದ ಉಚಿತ ಬಸ್ ಪ್ರಯಾಣ ಮಾಡುತ್ತಿದ್ದರೆ. ಇನ್ನೊಂದಡೆ ಕಾಂಗ್ರೆಸ್ ಸರ್ಕಾರದ ವಿರುದ್ದ ಆಟೋ ಚಾಲಕರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.

ನಗರದ ನಿಲೀಜನ್ ರಸ್ತೆಯಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಆಟೋ ಚಾಲಕರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕದಿಂದ ಆಟೋ ಚಾಲಕರಿಗೆ ತೊಂದರೆಯಾಗುತ್ತಿದೆ. ಮಹಿಳಾ ಪ್ರಯಾಣಿಕರು ನಮಗೆ ಆಧಾರವಾಗಿದ್ದಾರೆ. ಆದ್ರೆ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆಯಿಂದ ಕೆಲಸವಿಲ್ಲದಂತಾಗುತ್ತಿದೆ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿದೆ. ಹೀಗಾಗಿನಗರ ವ್ಯಾಪ್ತಿಯಲ್ಲಿ ಉಚಿತ ಬಸ್ ಅವಕಾಶ ನೀಡಬಾರದು. ಆಟೋ ರಿಕ್ಷಾ ಚಾಲಕರಿಗೆ ಪ್ರತಿ ತಿಂಗಳು 10 ಸಾವಿರ ನೀಡಬೇಕು. ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ನೀಡಬೇಕು, ಚಾಲಕರು ಅಪಘಾತದಲ್ಲಿ ಸಾವನ್ನಪ್ಪಿದರೆ 5 ಲಕ್ಷ ಪರಿಹಾರ ನೀಡವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಆಟೋ ಚಾಲಕರ ಬೇಡಿಕೆಗೆ ಸರ್ಕಾರ ಸ್ಪಂದಸದಿದ್ರೆ
ಆಗದೆ ಇದ್ದಲ್ಲಿ ಆಟೋ ರಿಕ್ಷಾ ಬಂದ್ಗೆ ಕರೆ ನೀಡಬೇಕಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು
bigtvnews | Hubli Dharwad News | Kannada News | Karnataka News Hubli News | News In Hubli | Local news





