Breaking News

ಸಾರ್ವಜನಿಕರ ಅರ್ಜಿಗಳ ಶೀಘ್ರ ವಿಲೇವಾರಿಗೆ ಕ್ರಮವಹಿಸಿ ಸತೀಶ ಚಿಟಗುಪ್ಪಿ

ಹುಬ್ಬಳ್ಳಿ ಎಲ್ಲ ಯೋಜನೆಗಳು ಪ್ರತಿಯೊಬ್ಬರಿಗೂ ಪಾರದರ್ಶಕವಾಗಿ ಸಿಗುವಂತೆ ಮಾಡಬೇಕು. ಫಲಾನುಭವಿಗಳು ಪಡೆದ ಯೋಜನೆಗಳ ಬಗ್ಗೆ ಅವಲೋಕನ ಮಾಡಬೇಕಿದೆ. ಸಾರ್ವಜನಿಕರ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರಾದ ಸತೀಶ ಚಿಟಗುಪ್ಪಿ ಹೇಳಿದರು.

ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ, ಹುಬ್ಬಳ್ಳಿ ತಾಲೂಕು ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿನಲ್ಲಿ ಯಾವುದೇ ತರಹದ ಕಲಬೆರಕೆಯಾಗಬಾರದು. ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಯೋಜನೆಗಳ ಹಣ ದುರುಪಯೊಗವಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಲೋಕಾಯುಕ್ತ ಉಪ ಪೊಲೀಸ್ ಅಧೀಕ್ಷಕರಾದ ವಿಜಯ ಬಿರಾದಾರ್ ಮಾತನಾಡಿ, ಮರಗಳನ್ನು ನೆಡುವುದು ಅಷ್ಟೇ ಅಲ್ಲ ಅವುಗಳ ಸಂರಕ್ಷಣೆ ಮಾಡಬೇಕು. ವಿದ್ಯುತ್ ಟಿ.ಸಿ. ಗಳು ಕೆಟ್ಟರೆ ತಕ್ಷಣ ಬದಲಾಯಿಸಬೇಕು. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆಯಾಗಬಾರದು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಅಧಿಕಾರಿಗಳಿಗೆ ಅರ್ಜಿಗಳನ್ನು ನೀಡಲು ಬಂದರೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಆ ಅರ್ಜಿಗಳಿಗೆ ಸ್ವೀಕೃತಿಯನ್ನು ನೀಡಬೇಕು. ಸಾರ್ವಜನಿಕರು ನೀಡಿದ ಅರ್ಜಿಗಳನ್ನು ಸ್ವೀಕರಿಸುವಾಗ ಅಧಿಕಾರಿಗಳು ಅರ್ಜಿದಾರರ ಮೊಬೈಲ್ ಸಂಖ್ಯೆಯನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಅಥವಾ ಮೂರನೇ ವ್ಯಕ್ತಿಯ ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳಬಾರದು. ಸರಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಕಡಿಮೆ ಮಾಡುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು

.

ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಿ, ಅವುಗಳ ಸ್ವಚ್ಛತೆ ಆದ್ಯತೆ ನೀಡಬೇಕು. ಎಸ್.ಸಿ.ಪಿ ಹಣ ಬೇರೆ ಕಾಮಗಾರಿಗಳಿಗೆ ವಿನಿಯೋಗವಾಗುತ್ತಿರುವುದು ಕಂಡು ಬಂದಿದ್ದು, ಹಣ ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಸಾರಿಗೆ ಬಸ್ಸುಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕಾಗಿದೆ. ಮಳೆಗಾಲ ಶುರುವಾಗಿದ್ದರಿಂದ ಸರಕಾರಿ ಶಾಲೆಗಳ ಮೇಲ್ಛಾವಣಿಯನ್ನು ದುರಸ್ಥಿ ಮಾಡಿಸಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳ ವಸತಿ ನಿಲಯಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು. ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಪರೀಕ್ಷಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸರ್ಕಾರಿ ಕಚೇರಿಗಳಲ್ಲಿ ಸರ್ಕಾರ ನಿಗದಿ ಮಾಡಿದ ಅರ್ಜಿ ಶುಲ್ಕವನ್ನು ಮಾತ್ರ ಪಡೆದುಕೊಳ್ಳಬೇಕು. ಹೊರತುಪಡಿಸಿ ಹೆಚ್ಚುವರಿ ಶುಲ್ಕ ಪಡೆಯುವುದು ಕಂಡು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕಛೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕಡ್ಡಾಯ ಗುರುತಿನ ಪತ್ರ ಐ.ಡಿ. ಕಾರ್ಡ ಹಾಕಿಕೊಳ್ಳಬೇಕು. ಪಡಿತರ ಚೀಟಿಗಳನ್ನು ಶೀಘ್ರದಲ್ಲಿ ಜನರಿಗೆ ವಿತರಿಸಬೇಕು ಎಂದು ಅವರು ತಿಳಿಸಿದರು.

ಲೋಕಾಯುಕ್ತ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಂಬAಧಿಸಿದ ಅಧಿಕಾರಿಗಳು ವಿಲೇವಾರಿ ಮಾಡುವಂತೆ ತಿಳಿಸಿದರು. ಒಟ್ಟಾರೆ 12 ಅರ್ಜಿಗಳು ಸ್ವೀಕೃತಗೊಂಡಿವೆ.

ಈ ಸಭೆಯಲ್ಲಿ ಉಪ ತಹಶೀಲ್ದಾರ ಶಿವಾನಂದ ಹೆಬ್ಬಳ್ಳಿ, ಜಿ.ವಿ. ಪಾಟೀಲ್, ಹುಬ್ಬಳ್ಳಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಂಗಾಧರ್ ಕಂದಕೂರ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಾದ ಪ್ರಭುಲಿಂಗ ಹಿರೇಮಠ, ಕರಿಯಪ್ಪ ಬೆಣ್ಣೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

Share News

About BigTv News

Check Also

10 ದಿನಗಳಲ್ಲಿ ನ್ಯಾಯ ಸಿಗದಿದ್ದರೆ ಸಲ್ಲೇಖನ ವ್ರತ! ಸರ್ಕಾರಕ್ಕೆ ಗುಣಧರನಂದಿ ಸ್ವಾಮೀಜಿಗಳ ಕೊನೆಯ ಎಚ್ಚರಿಕೆ…

ಜೈನ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹ: ಚಿಕ್ಕೋಡಿಯಿಂದ ಸುವರ್ಣಸೌಧದವರೆಗೆ ಪಾದಯಾತ್ರೆ ಘೋಷಣೆ! ಜೈನ ಸಮುದಾಯದ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವ್ರತದ …

Leave a Reply

Your email address will not be published. Required fields are marked *