ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಕ ಸಂಘದ ಅಧ್ಯಕ್ಷರು , ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಹಲವಾರು ಭಾರಿ ಹೋರಾಟ ಮಾಡುತ್ತಲೇ ಶಿಕ್ಷಕರ ಬೇಡಿಕೆ ಈಡೇರಿಸಲು ಆಗ್ರಹಿಸಿದರು. ಯಾವುದೇ ಪ್ರಯೋಜನವಾಗಿಲ್ಲ , ಈಗ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೊಟ್ಟ ಮಾತಿನಂತೆ ನಡೆಯಬೇಕು ಶಿಕ್ಷಕರ ಬೇಡಿಕೆ ಈಡೇರಿಸುವ ಮೂಲಕ ಶಿಕ್ಷಕರ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಎಸ್.ಬಿ.ಕೇಸರಿ ಅವರು ಆಗ್ರಹಿಸಿದರು,
ಹಳೆ ಪಿಂಚಣಿ ಯೋಜನೆ ಜಾರಿ, ವೇತನ ಹೆಚ್ಚಳ, ಶಿಕ್ಷಕರ ವರ್ಗಾವಣೆ, ಶಿಕ್ಷಕರ ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಮುಂದಾಗಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




