Breaking News

ಲಿಂಗಾಯತರನ್ನು OBC ಮೀಸಲಾತಿಗೆ ಸೇರಿಸಲು ಬೃಹತ್ ಮಠಾಧೀಶರ ಸಭೆ

ಹುಬ್ಬಳ್ಳಿ: ವೀರಶೈವ ಲಿಂಗಾಯತ ಒಳಪಂಗಡಗಳನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು, ಇಡೀ ಕರ್ನಾಟಕದ ಮಠಾಧೀಶರು ಒಗ್ಗೂಡಿ ಬೃಹತ್ ಸಭೆ ಮಾಡುತ್ತಾ, ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ..

ಹೌದು… ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಬೃಹತ್ ಸಭೆ ವೇದಿಕೆಯನ್ನು ಹಮ್ಮಿಕೊಂಡಿದ್ದ, ವೀರಶೈವ ಲಿಂಗಾಯತ ಮಠಾಧೀಶರು, ಎಲ್ಲ ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು.

ಈ ಬೃಹತ್ ಮಠಾಧೀಶರ ಸಭೆಗೆ ದಿವ್ಯ ಸಾನಿಧ್ಯವನ್ನು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಸ್ವಾಮೀಜಿ, ಉಜನಿ ಪೀಠಗಳ ಜಗದ್ಗುರುಗಳು, ಅನ್ನದಾನೇಶ್ವರ ಸ್ವಾಮೀಜಿ, ಶಿರಹಟ್ಟಿ ಫಕೀರೇಶ್ವರ ಮಠದ ಫಕೀರ ಸಿದ್ಧರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಭಾಗಿಯಾಗಿದ್ರು. ಅಷ್ಟೇ ಅಲ್ಲೆ ವೀರಶೈವ ಲಿಂಗಾಯತ ಮುಖಂಡರು ಕೂಡ ಭಾಗವಹಿಸಿದ್ದು, ಎಲ್ಲ ವೀರಶೈವ ಲಿಂಗಾಯತ ಒಳಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಲು ಮತ್ತು ಹಕ್ಕೊತ್ತಾಯ ನೀಡಬೇಕೆಂದು ಸರ್ಕಾರಕೆ, ಒತಾಯ ಮಾಡಿದರು.

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕುನಿಂದ ಕೊಲೆ ಯತ್ನ ನಗರದಲ್ಲಿ …

Leave a Reply

Your email address will not be published. Required fields are marked *