ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿಯೋರ್ವ ಧಾರುಣವಾಗಿ ಸಾವನ್ನಪ್ಪಿದ್ದು, ಮತ್ತೋರ್ವ ವಿಧ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ವಿಶೃತ್ ಬೆಳಗಲಿ (9) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು,
ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.
ನಿರ್ಮಾಣ ಹಂತದ ಕಟ್ಟಡದ ಕೆಳಭಾಗ ಆಟವಾಡುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ.

ಇನ್ನೂ ಆಟವಾಡುವ ಸಂದರ್ಭ ಏಕಾಏಕಿ ಗೋಡೆ ಕುಸಿದು ಬಿದ್ದು, ಘಟನೆ ನಡೆದಿದೆ. ಬೆಳಿಗ್ಗೆ ಶಾಲೆಯ ಸಮಯ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳು ಅಪಘಾತಕ್ಕೆ ತುತ್ತಾಗಿದ್ದಾರೆ. ನಿರ್ಮಾಣ ಹಂತದ ಕಟ್ಟಡದ ಕೆಳಗೆ ಆಡವಾಡುವ ಸಂದರ್ಭ ಘಟನೆ ನಡೆದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ ವಿದ್ಯಾರ್ಥಿ ವಿಶೃತ್ ಬೆಳಗಲಿ ಹಾಗೂ ಇನ್ನೋರ್ವ ವಿದ್ಯಾರ್ಥಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

