ಭಾನುವಾರ ಬೆಳಗ್ಗೆ ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಷಟಲ್ ಬಸ್ ಅಪಘಾತವಾಗಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಘಟನೆಯಿಂದ 10 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್‌ನ ಚಾಲಕ ರಾತ್ರಿಯ ಪಾಳಯದಲ್ಲಿ ಕೆಲಸ ಮಾಡುತ್ತಿದ್ದು, ಆತನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮುಂಜಾನೆ ನಡೆದ ಘಟನೆಯಿಂದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





