Breaking News

ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಗೆ ಕೇಂದ್ರ ಅಡ್ಡಗಾಲು: ಸಚಿವ ಸಂತೋಷ ಲಾಡ್

ಹುಬ್ಬಳ್ಳಿ 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೇ ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ. ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು ಕೊಡುತ್ತಾರೆ.
ಕೇಂದ್ರ ಸರ್ಕಾರವನ್ನು ಕೇಳಿ ಗ್ಯಾರೆಂಟಿ ಘೋಷಣೆ ಮಾಡಿದ್ರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪತ್ರದ ಮೂಲಕ ಅವರು ತಾನೇ ಕೊಟ್ಟಿದ್ದು. ಕಳೆದ ಬಾರಿ ಬಿಜೆಪಿ ಪ್ರಣಾಳಿಕೆಯನ್ನು ಕೇಂದ್ರಕ್ಕೆ ಕೇಳಿ ಕೊಟ್ಟಿದ್ರಾ..?ಪ್ರಣಾಳಿಕೆ ಕೊಡುವಂತದ್ದು ರಾಜ್ಯಕ್ಕೆ ಸಂಬಂಧ ಪಟ್ಟಿದ್ದು. ಕೇಂದ್ರದವರು ಮಾತು ಕೊಟ್ಟು ವಾಪಸ್ ಪಡೆದ ಉದ್ದೇಶ ಏನು…? ನಾವು ನೀಡಿದ ಕಾರ್ಯಕ್ರಮ ಆಗಬಾರದು ಎಂಬ ಉದ್ದೇಶ ಅವರಿಗಿದೆ. ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ ಎಂದು ಅವರು ಹೇಳಿದರು.

ಶಕ್ತಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳಲ್ಲಿ ಗೊಂದಲ ವಿಚಾರವಾಗಿ ಮಾತನಾಡಿದ ಅವರು, ಯಾವುದೇ ಗೊಂದಲ ಇಲ್ಲಾ. ಸುಮಾರು 60 ಸಾವಿರ ಕೋಟಿ ವೆಚ್ಚದಲ್ಲಿ ಆಗುತ್ತಿರುವ ಕಾರ್ಯಕ್ರಮ. ಇದನ್ನು ಅನುಷ್ಠಾನಕ್ಕೆ ತರೋಕೆ ನಾವು ಸಮಯ ನಿಗದಿ ಪಡಿಸಿದ್ದೇವೆ.

ಮುಖ್ಯಮಂತ್ರಿ ಮುಂದುವರಿಕೆ ಚರ್ಚೆ ವಿಚಾರವಾಗಿ ನಾನು ಬಗ್ಗೆ ಮಾತನಾಡಲ್ಲ ಎಂದ ಅವರು, ಅಕ್ಕಿಗಾಗಿ ಮುಖಂಡರು, ಕಾರ್ಯಕರ್ತರೊಂದಿಗೆ ನಾಳೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದರು

ಕೈಗಾರಿಕೋದ್ಯಮ ವಿದ್ಯುತ್ ಬಿಲ್ ಹೆಚ್ಚಾಳಕ್ಕೆ ಬಂದ್ ಕರೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು,ಮುಂದಿನ ದಿನಗಳಲ್ಲಿ ಸರ್ಕಾರ ಇದರ ಬಗ್ಗೆ ಚರ್ಚೆ ಮಾಡುತ್ತದೆ ಎಂದು ಹೇಳಿದರು

Share News

About BigTv News

Check Also

ಸಚಿವ ಸಂಪುಟ ವಿಸ್ತರಣೆ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಸಿಗುತ್ತೆ ಮಂತ್ರಿಗಿರಿ ಭಾಗ್ಯ…?

ಸಚಿವ ಸಂಪುಟ 2.0: ಜು.8 ಬಳಿಕ ದೆಹಲಿ ದೌಡು, ಯಾರಿಗೆ ಮಂತ್ರಿಗಿರಿ ಲಕ್..? 20 ಸ್ಥಾನಗಳಿಗೆ 50+ ಆಕಾಂಕ್ಷಿಗಳು: ಕಾಂಗ್ರೆಸ್‌ನಲ್ಲಿ …

Leave a Reply

Your email address will not be published. Required fields are marked *