Breaking News

ಗಾಂಜಾ ಸೇವನೆ ಬೇಡ, ಹುಬ್ಬಳ್ಳಿಯಲ್ಲಿ ಶಾಲಾ ಮಕ್ಕಳಿಂದ ವಿಭಿನ್ನ ರೀತಿಯಲ್ಲಿ ಸೂಚನಾ ಫಲಕ ಹಿಡಿದು ಮನವಿ..

ಹೌದು ಹುಬ್ಬಳ್ಳಿ- ಧಾರವಾಡ ಪೋಲಿಸ್ ಕಮೀಷನರ ಆದೇಶದಂತೆ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆ ಜನಸ್ನೇಹಿ ಬಿಟ್ ನಂ52 ರಲ್ಲಿ ಇಂದು ಗಾಂಜಾ ಹಾಗೂ ಇನ್ನಿತರ ಮಾದಕ ವಸ್ತುಗಳ ಸೇವನೆ ವಿರುದ್ಧ ಜನಜಾಗೃತಿ ಅಭಿಯಾನ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನವ ಆನಂದ ನಗರದ ಸರಕಾರಿ ಶಾಲೆಯ ಮಕ್ಕಳು ಭಾಗವಹಿಸಿದ್ದರು, ಈ

ಕಾರ್ಯಕ್ರಮಕ್ಕೆ ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಅವರು ಚಾಲನೆ ನೀಡಿದರು ಅಲ್ಲದೆ ಕಾರ್ಯಕ್ರಮದಲ್ಲಿ ಇತರೆ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.ಮಾಧಕ ವಸ್ತುಗಳ ಸೇವನೆ ಮಾಡುವುದರಿಂದ ಮತ್ತು ಅದರಿಂದ ಅನಾಹುತಗಳ ಬಗ್ಗೆ ಘೋಷಣೆ ಕೂಗುತ್ತಾ ನವ ಆನಂದ ನಗರದಲ್ಲಿನ ಪ್ರಮುಖ ಬೀದಿಗಳಲ್ಲಿ ಸಂಚಾರಮಾಡಿ ಜಾಗೃತಿ ಮೂಡಿಸಿದರು. ಇನ್ನು ಪೋಲಿಸ್ ಸಿಬ್ಬಂದಿಗಳು ಸಹ ಈ

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧಕ ವಸ್ತುಗಳ ಸೇವನೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ಕಾರ್ಯದಲ್ಲಿ ನವ ಆನಂದ ನಗರದ ಸರಕಾರಿ ಶಾಲೆ ಸಿಬ್ಬಂದಿಗಳು ಹಾಗೂ ಶಾಲೆಯ ಮುಖ್ಯಸ್ಥರು ಸಹ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೋಳಿಸಿದ್ದಾರೆ. ಕಾರ್ಯಕ್ರಮ ನಂತರದಲ್ಲಿ ಮಾಡಿದ ಶಾಲೆಯ ಮುಖ್ಯಸ್ಥರು ಹಾಗೂ ಪೋಲಿಸ್ ಅಧಿಕಾರಿಗಳು ಯಾರು ಮಾದಕ ವಸ್ತುಗಳ ಸೇವನೆ ಮಾಡಬೇಡಿ ಮತ್ತು ಇದರಿಂದ ಎಚ್ಚರಿಕೆ ಯಿಂದ ಇರಿ ಇಲ್ಲದೆ ಹೋದರೆ ಅನಾಹುತ ಹಾಗುವದು ಗ್ಯಾರಂಟಿ ಎಂದು ತಿಳಿಸಿದ್ದಾರೆ ,

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *