Breaking News

ಕೇಂದ್ರದ 5 ಕೆಜಿ ಬಿಟ್ಟು ರಾಜ್ಯ ಕಾಂಗ್ರೆಸ್ ಸರ್ಕಾರ 10ಕೆಜಿಅಕ್ಕಿ ಕೊಡಲಿ ಜೋಶಿ

ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯ್ತು. ಇದುವರೆಗೂ ರಾಜ್ಯದ ಜನತೆಗೆ ಈ ಸರ್ಕಾರ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರದ್ದು. ಕೇಂದ್ರ ಕೊಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿಯನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು

ಧಾರವಾಡದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನು ಈಗ ನ್ಯಾಷನಲ್ ಫುಡ್ ಸೆಕ್ಯುರಿಟಿ ಆ್ಯಕ್ಟ್ ಅಡಿಯಲ್ಲಿ ಕೊಡುತ್ತಿದೆ. ಈ ಆ್ಯಕ್ಟ್ ಮಾಡಿದ್ದು ನಾವು ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ಅವರು ಆ್ಯಕ್ಟ್ ಪಾಸ್ ಮಾಡಿದ್ದರೂ ಅದಕ್ಕೆ ಹಣ ಇಟ್ಟಿರಲಿಲ್ಲ. ಮೋದಿಯವರು ಬಂದ ನಂತರ ಇದನ್ನು ನಾವು ಆರಂಭ ಮಾಡಿದ್ದೇವೆ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ಈಗ ಮೋದಿಯವರು ಕೊಡುತ್ತಿರುವ 5 ಕೆಜಿ ಅಕ್ಕಿ ಬಿಟ್ಟು ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ಕೊಡಲಿ. ಕೇಂದ್ರ ಸರ್ಕಾರದ ಮೇಲೆ ಕ್ಷುಲ್ಲಕ ಆರೋಪ ಮಾಡುವುದು ಸರಿಯಲ್ಲ. ಎಲ್ಲ ರಾಜ್ಯಗಳು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದರೆ ಮುಂದೇನು? ಎಲ್ಲರಿಗೂ ಕೇಂದ್ರ ಅಕ್ಕಿ ಕೊಡಲು ಆಗುತ್ತಾ? ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲೂ ಹೆಚ್ಚುವರಿ ಅಕ್ಕಿಯನ್ನು ನಾವು ಕೊಟ್ಟಿಲ್ಲ. ಹೆಚ್ಚುವರಿ ಅಕ್ಕಿಯನ್ನು ಆಯಾ ರಾಜ್ಯಗಳು ವ್ಯವಸ್ಥೆ ಮಾಡಿಕೊಳ್ಳುತ್ತಿವೆ ಎಂದರು.

ಜಗದೀಶ ಶೆಟ್ಟರ್ಗೆ ವಿಧಾನ ಪರಿಷತ್ ಟಿಕೆಟ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರಿಗೆ ಸಂಖ್ಯಾ ಬಲವಿದೆ. ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಿದೆ. ಅವರಿಗೆ ಒಳ್ಳೆಯದಾಗಲಿ ಎಂದರು.

ಫ್ರೀ ಬಸ್ ವ್ಯವಸ್ಥೆ ಬಗ್ಗೆ ಮಾತನಾಡಿದ ಅವರು, ಮಹಿಳೆಯರಿಗೆ ಉಚಿತ ಬಸ್ ಪಾಸ್ ಮಾಡಿರುವುದರಿಂದ ಅವಘಡಗಳು ಆಗುತ್ತಿವೆ. ಯಾವುದೇ ವ್ಯವಸ್ಥೆ ಇಲ್ಲದೇ ಪ್ಲಾನ್ ಇಲ್ಲದೇ ಮಾಡಿದ ಯೋಜನೆ ಇದು. ಅಗ್ಗದ ಜನಪ್ರಿಯತೆಗೆ ಮಾಡಿದ ಯೋಜನೆ ಇದು. ಫ್ರೀ ಕೊಟ್ಟಷ್ಟೇ ಜನರ ಜೀವನವೂ ಅಷ್ಟೇ ಮುಖ್ಯ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದರು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *