Breaking News

ಪ್ಲೈಓವರ ಕಾಮಗಾರಿ ವೇಳೆ ನೆಲಕ್ಕೆ ಅಪ್ಪಳಿಸಿದ ಕ್ರೇನ್ ತಪ್ಪಿದ ದುರಂತ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ.

ಹೌದು.. ವಿದ್ಯುತ್ ತಂತಿಯ ಮೇಲೆ ಕ್ರೇನ್ ಮಗುಚಿ ಬಿದ್ದ ಪರಿಣಾಮ ಒಂದು ಬೈಕ್ ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ.

ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಆಯತಪ್ಪಿ ಹೊರಳಿ ಬಿದ್ದಿರುವ ಕ್ರೇನ್ ನಿಂದ ವಿದ್ಯುತ್ ಕಂಬಗಳು ನೆಲಕ್ಕೆ ಅಪ್ಪಳಿಸಿವೆ.

ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದ ಕಾರಣ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಹುಬ್ಬಳ್ಳಿ ಹಳೇ ಕೋರ್ಟ್ ವೃತ್ತದಿಂದ ಕೇಶ್ವಾಪುರ ಸರ್ಕಲ್‌ವರೆಗಿನ ರಸ್ತೆ ಸಂಚಾರ ಬಂದ್ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *