ಹುಬ್ಬಳ್ಳಿ ಇಂದು ಬೆಳಿಗ್ಗೆ ನಗರದ ನ್ಯಾಯಾಲಯಗಳ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ. ಹಂದ್ರಾಳ ಅವರು ಉದ್ಘಾಟಿಸಿದರು.
ವಕೀಲರಾದ ಆರ್. ಜಿ. ಮಟ್ಟಿ ಅವರು ವಿವಿಧ ಯೋಗಾಸನಗಳನ್ನು ಹೇಳಿಕೊಟ್ಟರು.
ಕಾರ್ಯಕ್ರಮದಲ್ಲಿ ನಗರದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ವಕೀಲರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





