ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ – ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಪ್ರಧಾನ ಮಂತ್ರಿ ಸ್ವಾಸ್ಥ ಸುರಕ್ಷಾ ಯೋಜನೆ ಅಡಿ ನಿರ್ಮಾಣವಾಗಿರುವ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿರುವ ಸೂಪರ್ ಸ್ಪೆಷಾಲಿಟಿ ಕಟ್ಟಡದ ನೂತನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 72 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶೇಷ ತುರ್ತು ಚಿಕಿತ್ಸಾ ಘಟಕ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡು ಕಟ್ಟಡ ಉದ್ಘಾಟನೆ ಆಗಬೇಕಿದೆ.
ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ಕಿಮ್ಸ್ ಸಿಬ್ಬಂದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ. 1100 ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜೊತೆ ಚರ್ಚಿಸುತ್ತೇನೆ ಎಂದರು.
ಇವಿಎಮ್ ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿಗೆ ತಿರುಗೇಟು ನೀಡಿದ ಜೋಶಿ, ರಾಜಕೀಯ ಕಾರಣಕ್ಕೆ ಕಾಂಗ್ರೆಸ್ ನವರು ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಐದು ಗ್ಯಾರಂಟಿ ಯೋಜನೆ ವಿಚಾರದಲ್ಲೂ ಹಾಗೆ ಸುಮ್ಮನೆ ಆಶ್ವಾಸನೆ ಕೊಟ್ಟಿದ್ದಾರೆ. ಚೆಲುವರಾಯಸ್ವಾಮಿ ಓಟ್ಟಾಗಿ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತೇವೆ ಅಂದಿದ್ರು ಎಂದರು.
ಸಿದ್ದರಾಮಯ್ಯ ಏಮ್ಸ್‌ು ರಾಯಚೂರಿಗೆ ಶಿಫ್ಟ್ ಮಾಡಲು ಕೇಂದ್ರಕ್ಕೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರವಾಗಿ ನಾನು ಹೆಚ್ಚಿಗೆ ಮಾತಾಡಲ್ಲ. ಧಾರವಾಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಈ ಬಗ್ಗೆ ಸಿದ್ದರಾಮಯ್ಯನವರಿಗೆ ಏನು ಹೇಳ್ತಾರೆ ಅನ್ನೋದು ನನ್ನ ಪ್ರಶ್ನೆ, ಕಾಂಗ್ರೆಸ್ ಜನಪ್ರತಿನಿಧಿಗಳು ಏನು ಹೇಳ್ತಾರೆ ಅವರೇ ಡಿಸೈಡ್ ಮಾಡಲಿ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





