Breaking News

ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಮೃತ ಕುಟುಂಬಸ್ಥರ ಅಕ್ರೋಶ

ಮಂಡ್ಯ: ಬಿಜಿಎಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿಯ ಆಸ್ಪತ್ರೆ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.

ಬಿಜಿಎಸ್ ಆಸ್ಪತ್ರೆ ವೈದ್ಯರ ವಿರುದ್ದ ಕರ್ತವ್ಯ ಲೋಪ ಆಗಿದೆ ಎಂದು ಮೃತ ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 25 ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ಹನುಮನಕೊಪ್ಪಲು ಗ್ರಾಮದ ಚಂದ್ರ(40) ಇಂದು ಮೃತಪಟ್ಟಿದ್ದಾರೆ. ಚಂದ್ರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದು, ಚಂದ್ರು ಸಾವಿಗೆ ಪರಿಹಾರ ನೀಡಬೇಕೆಂದು ಸಂಬಂಧಿಕರು ಮತ್ತು ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಪರಿಹಾರ ಕೊಡದೆ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸ್ಥಳಕ್ಕೆ ಬೆಳ್ಳೂರು ಪೊಲೀಸರು ಆಗಮಿಸಿದ್ದು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಕೌಟುಂಬಿಕ ಕಲಹ: ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ವೈದ್ಯ ಡಾ.ಮಹೇಂದ್ರ ರೆಡ್ಡಿ ವೈದ್ಯೆಯಾಗಿದ್ದ ಪತ್ನಿ ಡಾ.ಕೃತ್ತಿಕಾ ರೆಡ್ಡಿಯನ್ನು ಕೊಲೆಗೈದುರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ನಡುವೆ …

Leave a Reply

Your email address will not be published. Required fields are marked *