ಮಂಡ್ಯ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಒಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಪಾಂಡವಪುರ ತಹಶೀಲ್ದಾರ್ ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗುರುವಾರ ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ಕಚೇರಿಯಲ್ಲಿ 40 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಸೌಮ್ಯಾ ಸಿಕ್ಕಿಬಿದ್ದಿದ್ದಾರೆ.
ಗ್ರಾಮಲೆಕ್ಕಾಧಿಕಾರಿ ಒಬ್ಬರ ವರ್ಗಾವಣೆ ವಿಚಾರಕ್ಕೆ ಸೌಮ್ಯಾ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗ್ರಾಮಲೆಕ್ಕಾಧಿಕಾರಿ ಮರಿಸ್ವಾಮಿ ಅವರನ್ನು ಗುಮ್ಮನಹಳ್ಳಿಯಿಂದ ದೊಡ್ಡಮ್ಮನಹಳ್ಳಿಗೆ ವರ್ಗಾವಣೆ ಮಾಡಲು ತಹಶೀಲ್ದಾರ್ ಸೌಮ್ಯಾ ಲಂಚ ಕೇಳಿದ್ದರು. ಈ ಬಗ್ಗೆ ಮರಿಸ್ವಾಮಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ದಾಳಿ ನಡೆಸಿ ಹಣ ಪಡೆಯುವ ಸಮಯದಲ್ಲಿ ತಹಶೀಲ್ದಾರ್ ಬಂಧನ ಮಾಡಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





