ಹುಬ್ಬಳ್ಳಿ ಯಿಂದ ಗದಗ ನಗರಕ್ಕೆ ಹೊರಟ ಬುಲೇರೋ ವಾಹನ ರೆಸ್ತೆ ಮದ್ಯೆ ಇರುವ ವಿದ್ಯತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ. ಇಂದು ಸಾಯಂಕಾಲ ಈ ಘಟನೆ ನಡೆದಿದ್ದು. ವಾಹನ ಚಾಲಕ ನಾಪತ್ತೆಯಾಗಿದ್ದಾನೆ, ಘಟನೆ ನಂತರ ಸ್ಥಳಕ್ಕೆ ಸ್ಥಳೀಯ ಪೋಲಿಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಚಾಲಕನ ಅತಿಯಾದ ವೇಗದಿಂದ ವಾಹನ ಚಾಲನೆ ಮಾಡಿದ್ದರಿಂದ ಈ ಅವಗಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿಯ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿಯೇ ಬಿದ್ದಿದ್ದ ಶವವನ್ನು ಸ್ಥಳಾಂತರ ಮಾಡಿ ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ,ಸದ್ಯ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ ಹುಬ್ಬಳ್ಳಿಯ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

bigtvnews | Hubli Dharwad News | Kannada News | Karnataka News Hubli News | News In Hubli | Local news

