Breaking News

27ರಿಂದ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಸಂಚಾರ ಆರಂಭ

ಹುಬ್ಬಳ್ಳಿ: ವಂದೇ ಭಾರತ್ ರೈಲು ಸಂಚಾರ ಇದೇ ಜೂನ್ 27 ರಿಂದ ಕೆಎಸ್‌ಆರ್ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಪ್ರಾರಂಭಿಸಲಿದೆ. ಧಾರವಾಡ ರೈಲು ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ವರ್ಚುಯಲ್ ಆಗಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಹೌದು..ಪ್ರತಿ ಮಂಗಳವಾರ ಹೊರತುಪಡಿಸಿ, ವಾರದ ಆರು ದಿನ ಈ ರೈಲು ಸಂಚರಿಸಲಿದೆ. ಬೆಳಗ್ಗೆ 5.45ಕ್ಕೆ ಕೆಎಸ್ಎಆರ್ ಬೆಂಗಳೂರು ನಿಲ್ದಾಣದಿಂದ ಹೊರಡುವ ಈ ರೈಲು, 5.55ಕ್ಕೆ ಯಶವಂತಪುರ, 9.15 ಕ್ಕೆ ದಾವಣಗೆರೆ, 11.30ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ, ಮಧ್ಯಾಹ್ನ 12.10ಕ್ಕೆ ಧಾರವಾಡ ತಲುಪುವುದು.

ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1.15 ಕ್ಕೆ ಹೊರಟು, 1.35ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ, 3.38ಕ್ಕೆ ದಾವಣಗೆರೆ, ರಾತ್ರಿ 7.13ಕ್ಕೆ ಯಶವಂತಪುರ ಹಾಗೂ 7.45ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣ ತಲುಪಲಿದೆ.

ಕೆಎಸ್ಆರ್ ಬೆಂಗಳೂರು ಮತ್ತು ಧಾರವಾಡ ಮಧ್ಯೆ ಸಂಚರಿಸುವ ಈ ವಂದೇ ಭಾರತ್ ರೈಲು ಸದ್ಯ 8 ಬೋಗಿಗಳೊಂದಿಗೆ ಸಂಚರಿಸಲಿದೆ. ಪ್ರಯಾಣಿಕರ ಸ್ಪಂದನೆ ಗಮನಿಸಿ, ಬೋಗಿಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ನೈಋತ್ಯ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.‌

ದೇಶದಲ್ಲಿ ಅತಿವೇಗವಾಗಿ ಸಂಚಾರ ಮಾಡುವ ರೈಲಿನಲ್ಲಿ ಇದು ಒಂದಾಗಿದೆ. ಈ ರೀತಿ ಹೈಸ್ಪೀಡ್‌ ರೈಲು ಉತ್ತರ ಕರ್ನಾಟಕದ ಭಾಗದ ಜನರಿಗೆ ಲಬಿಸಿದ್ದು ಎಲ್ಲರೂ ಹೆಮ್ಮೆ ಪಡುವ ವಿಷಯವಾಗಿದೆ.

Share News

About admin

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *