Breaking News

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ;ನಳಿನ್‌ಕುಮಾರ್‌ ಕಟೀಲ್‌ ಸ್ಪಷ್ಟನೆ..

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಎಂದು ನಳಿನ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ನಾಲ್ಕು ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗರೆ. ಅಲ್ಲದೇ ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

Share News

About admin

Check Also

ಬಾಡಿವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ಅಕ್ರಮ ವಸೂಲಿಗೆ ಯತ್ನ: ಮೂವರು ಟ್ರಾಫಿಕ್ ಪೊಲೀಸರು ಸಸ್ಪೆಂಡ್!

ಬಾಡಿ ವಾರ್ನ್ ಕ್ಯಾಮೆರಾ ಆಫ್ ಮಾಡಿ ಹಣ ವಸೂಲಿ ಯತ್ನ: 3 ಟ್ರಾಫಿಕ್ ಪೊಲೀಸರು ಸಸ್ಪೆಂಡ್ — ಇನ್ನು ಕೆಲ …

Leave a Reply

Your email address will not be published. Required fields are marked *