ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಕುರಿತು ‘ ಸಭೆಯಲ್ಲಿ ಯೋಜನೆ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಸೇರಿ ಕಂದಾಯ, ಗ್ರಾಮೀಣಾಭಿವೃದ್ಧಿ 3 ಇಲಾಖೆ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ’ ಎಂದರು.
ಇನ್ನು ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಆ್ಯಪ್ ಬಗ್ಗೆ ಸಿ.ಎಂ. ಗೆ ತೋರಿಸುತ್ತೇವೆ. ಬಳಿಕ ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಸಂಪುಟದಲ್ಲಿ ಚರ್ಚಿಸಿ, ಆಗಸ್ಟ್ 17 ಅಥವಾ 18ರಂದು ‘ಗೃಹಲಕ್ಷ್ಮೀ’ ಜಾರಿ ಮಾಡುತ್ತೇವೆ ಎಂದು ತಿಳಿಸಲಾಗಿದೆ.
ಒಟ್ಟಿನಲ್ಲಿ ಈಗಾಗಲೇ ಉಚಿತ ಪ್ರಯಾಣ ಗ್ಯಾರಂಟಿ ಮಾತ್ರ ಪ್ರಾರಂಭ ಮಾಡಲಾಗಿದ್ದು , ಇನ್ನು ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರುವದನ್ನು ಕಾದು ನೋಡಬೇಕಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





