ಬೀದರ್ ನಿಂದ ಮಹಾರಾಷ್ಟ್ರಕ್ಕೆ ಸ್ವಿಫ್ಟ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡ್ತಿದ್ದ ಗಾಂಜಾಕೋರರ ಹೆಡೆಮುರಿ ಕಟ್ಟುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಜಾ ಜಪ್ತಿ ಜೊತೆಗೆ ಒಂದು ಕಾರು, 3 ಮೊಬೈಲ್, ಹಾಗೂ 15 ಸಾವಿರ ನಗದು ಜಪ್ತಿ ಮಾಡಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೆಲಂಗಾಣದಿಂದ ಬೀದರದ ಮೂಲಕ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ ಗಾಂಜಾಕೋರರು. ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ
ದಾಳಿ ನಡೆಸಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೀದರ್ ಎಸ್ಪಿ ಚೆನ್ನಬಸವಣ್ಣ ಲಂಗೋಟಿ ಮಾರ್ಗದರ್ಶನದಲ್ಲಿ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆದಿದ್ದು ಆರೋಪಿಗಳನ್ನು ಬಂಧನ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





