Breaking News

ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ

ಧಾರವಾಡ: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆತಿದೆ.

ಒಟ್ಟು ಐದು ರೈಲುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ. ಅದರಲ್ಲಿ ಧಾರವಾಡ ಬೆಂಗಳೂರು ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಕೂಡ ಒಂದು.

ಧಾರವಾಡದ ರೈಲು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದ ನಂತರ ಧಾರವಾಡ ಬೆಂಗಳೂರು ವಂದೇ ಭಾರತ ರೈಲಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ.ಸಂಕನೂರ ಅವರು ಚಾಲನೆ ನೀಡಿದರು.

ಧಾರವಾಡದಿಂದ ಹೊರಟ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಹುಬ್ಬಳ್ಳಿ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸ್ವತಃ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ.ಸಂಕನೂರ ಕೂಡ ವಂದೇ ಭಾರತ ರೈಲಿನಲ್ಲಿ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿ ಗಮನಸೆಳೆದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *