Breaking News

ಗ್ರಾಮೀಣ ಯೋಜನಾ ಸಹಾಯಕ ನಿರ್ದೇಶಕನ ಮೇಲೆ ಲೋಕಾಯುಕ್ತರ ದಾಳಿ

ರಾಯಚೂರು ಜಿಲ್ಲೆಯ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕನ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶರಣಪ್ಪ ಮಡಿವಾಳ, ರಾಯಚೂರು ಜಿಲ್ಲೆ ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕರಾಗಿದ್ದು, ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಕಚೇರಿ ಮತ್ತು ಮನೆಯ ಮೇಲೆ ದಾಳಿಯಾಗಿದೆ. ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ ನಲ್ಲೂ ದಾಳಿಯಾಗಿದೆ. ಶರಣಪ್ಪ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪವಿದ್ದು, ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.ಸದ್ಯ ದಾಖಲೆಗಳನ್ನು ಲೋಕಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶರಣಪ್ಪ ಮಡಿವಾಳ ಅವರು ಮೂಲತಃ ಕಲಬುರಗಿಯ ಆಳಂದ ತಾಲ್ಲೂಕಿನವರು.

Share News

About BigTv News

Check Also

ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!

ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ …

Leave a Reply

Your email address will not be published. Required fields are marked *