ಮೈಸೂರು ; ಆಶಾ ಕಾರ್ಯಕರ್ತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮೈಸೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರುವಂತೆ ಎಐಯುಟಿಯುಸಿ ಕೇಂದ್ರೀಯ ಕಾರ್ಮಿಕ ಸಂಘಟನೆಗೆ ಸಂಯೋಜಿತ ಗೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ 8,000 ನಿಗದಿಪಡಿಸಿ, ಆರ್ ಸಿ ಎಚ್ ಪೋರ್ಟಲ್ ಮೂಲಕ ಪ್ರೋತ್ಸಾಹ ಧನ ನೀಡುವುದನ್ನು ರದ್ದುಗೊಳಿಸಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗೌರವಧನವನ್ನು ಒಟ್ಟುಗೂಡಿಸಿ 15000 ನೀಡುವುದು ಸೇರಿದಂತೆ ಮುಂತಾದ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಸಲ್ಲಿಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮೈಸೂರು ಜಿಲ್ಲಾ ನಾಯಕರಾದ ಪಿ.ಎಸ್.ಸಂಧ್ಯಾ, ಜಿ.ಎಸ್.ಸೀಮಾ, ಜಿಲ್ಲಾಧ್ಯಕ್ಷರಾದ ಶುಭಮಂಗಳ, ಶೋಭಾ, ಗೀತಾ, ಕೆ.ದೊಡ್ಡಮ್ಮ, ಜಯಮ್ಮ, ರತ್ನಮ್ಮ, ಭಾಗ್ಯಮ್ಮ ಸೇರಿದಂತೆ ತಾಲೂಕು ಮುಖಂಡರು ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





