ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗವೊಂದು ದಾಳಿ ಮಾಡಿ ವಿದ್ಯಾರ್ಥಿನಿಗೆ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಧಾರವಾಡದ ಗರಗ ಗ್ರಾಮದಲ್ಲಿ ಇಂದು ನಡೆದಿದ್ದು, ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ನಿವಾಸಿ ಇಕರಾ ಗಡಕಾರಿ (8) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಉರ್ದು ಶಾಲೆಯಲ್ಲಿ 2ನೇ ತರಗತಿ ಒದುತ್ತಿದ್ದು, ಶಾಲೆ ಆಟದ ಸಮಯದಲ್ಲಿ ವಿದ್ಯಾರ್ಥಿನಿ ಶಾಲೆಯಿಂದ ಆಚ್ಚೆ ಬಂದು ಶಾಲೆಯ ಆವರಣಕ್ಕೆ ಮರಳುತ್ತಿರುವ ವೇಳೆ ಒಂಟಿ ಮಂಗ ವಿದ್ಯಾರ್ಥಿನಿಯ ಮೇಲೆ ದಾಳಿ ಮಾಡಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಮಂಗನ ದಾಳಿಯ ಗಮನಿಸಿದ ಸ್ಥಳೀಯರು ಮಗುವಿನ ರಕ್ಷಣೆಗೆ ಬರುತ್ತಿದಂತೆ ಮಂಗ ಸ್ಥಳದಿಂದ ಪರಾರಿಯಾಗಿದೆ. ಕೂಡಲೇ ಗ್ರಾಮಸ್ಥರು ಮಗುವನ್ನು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ. ಮಂಗನ ದಾಳಿಯುಂದ ವಿದ್ಯಾರ್ಥಿನಿ ಸೇರಿ ಸ್ಥಳಿಯರು ಬೆಚ್ಚಿಬಿದಿದ್ದಾರೆ. ಸದ್ಯ ಮಗುವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ರವಾನಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಒಂಟಿ ಮಂಗನನ್ನು ಅರಣ್ಯ ಇಲಾಖೆಯವರು ಹಿಡಿದು ಕಾಡಿನ ಒಳೆಗೆ ಬೀಡಲು ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





