ಧಾರವಾಡ:ಕರ್ನಾಟಕ ರಾಜ್ಯ ಸಮಗಾರ ಹರಳಯ್ಯ ಸಮಾಜದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ಕರ್ನಾಟಕ ರಾಜ್ಯ ಸಮಗಾರ ಅಭಿವೃದ್ಧಿ ಸಂಘದ ವತಿಯಿಂದ ಬರುವ ಜು.16 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕರ್ನಾಟಕ ಕುಲ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಸುಭಾಷ್ ನೇತ್ರೇಕರ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ ಜಂಟಿ ಕಾರ್ಯದರ್ಶಿಗಳಾದ ಚಂದ್ರಕಾಂತ ಪೂಜಾರ ಅವರ ತಂದೆ ತಾಯಿಯವರ ಸ್ಮರಣಾರ್ಥವಾಗಿ ಎಸ್ ಎಸ್ ಎಲ್ ಸಿ,10 ನೇ ತರಗತಿಯ ಸೊಬಿಎಸ್ ಸಿ,ಮತ್ತು ದ್ವೀತಿಯ ಪಿಯುಸಿ12 ನೇ ಸಿಬಿಎಸ್ ಸಿ ಎಲ್ಲಾ ವಿಭಾಗಗಳಲ್ಲಿ ಶೇ.75 ರಷ್ಟು ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಶರಣ ಹರಳಯ್ಯ ಸಮಗಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾವ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದ ಸಂಚಾಲಕರು ಹಾಗೂ ನಿಯೋಜಕರನ್ನಾಗಿ ಸಂಘದ ಧಾರವಾಡ ಜಿಲ್ಲಾ ಪ್ರಧಾನ ಸಂಚಾಲಕರಾದ ಕರ್ನಾಟಕ ವಿಶ್ವ ವಿದ್ಯಾಲಯದ ವಿಶ್ರಾಂತ ಉಪ ಕುಲಸಚಿವರಾದ ಯಲ್ಲಪ್ಪ ಸಮಗಾರ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಸಿ.ಜೆ ದೊಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





