ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿನ ರೈತರು ಸಾಲದಲ್ಲಿ ಸಿಲುಕಿರುವ ಹಿನ್ನಲೆ ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ಆದರೆ ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರಗಾರಲದ ಭಯ ಸೃಷ್ಟಿಯಾಗಿದೆ. ಒಣ ಬೇಸಾಯ ನಂಬಿಕೊಂಡಿರುವ ಉತ್ತರ ಕರ್ನಾಟಕ ಭಾಗದ ಪ್ರಮುಖ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ , ಬಾಗಲಕೋಟಿ ಸೇರಿದಂತೆ ಎಲ್ಲೆಡೆ ಈಗ ಆತಂಕ ಆವರಿಸಿದೆ.
ಹವಾಮಾನ ಇಲಾಖೆ ಪ್ರಕಾರ ಇನ್ನು ಹದಿನೈದು ದಿನಗಳಲ್ಲಿ ಮಳೆಯಾಗಬೇಕು. ವರುಣ ಕೃಪೆ ತೋರದಿದ್ದರೆ ರೈತರು ಹದಗೊಳಿಸಿದ ಭೂಮಿಯಲ್ಲಿ ಬೆಳೆ ಕಾಣಲು ಸಾಧ್ಯವಿಲ್ಲ. ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯವಿರುವ ರೈತರು ಕೈಗೊಂಡ ಬಿತ್ತನೆಗೆ ಉತ್ತಮ ಫಲಿತಾಂಶ ದೊರೆತಿದೆ. ಒಣ ಬೇಸಾಯದಲ್ಲಿ ಮಾತ ನಿರೀಕ್ಷೀತ ಮಳೆ ಬಾರದೆ ರೈತರು ಮೋಡಗಳ ಕಡೆಗೆ ಕೈ ಮಾಡಿ ಬಾರೋ ಮಳೆರಾಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news




