Breaking News

ವಚನ ಸಾಹಿತ್ಯದ ಪಿತಾಮಹ ಢಾ.ಫ.ಗು ಹಳಕಟ್ಟಿ ಜನ್ಮ ದಿನಾಚರಣೆ ಆಚಾರಣೆ

ಧಾರವಾಡ :ವಚನ ಸಾಹಿತ್ಯವನ್ನು ಸಂರಕ್ಷಿಸಿ ಅದಕ್ಕೆ ಬೆಳಕು ನೀಡಿದ ಮಹಾನ ಶರಣ ಡಾ.ಫ.ಗು. ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ತಮ್ಮದೆ ಆದ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕಿತ್ತೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಉಮಾ ಬಾಗಲಕೋಟ ಅವರು ಹೇಳಿದರು.

ಇಂದು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕ್ರಾತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಯೋಗದಲ್ಲಿ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಚನಗಳ ಸಂರಕ್ಷಣೆಯೊಂದಿಗೆ ಗುಣಮಟ್ಟದ ಎಲ್ಲ ವಚನಗಳನ್ನು ವರ್ಗೀಕರಿಸಿ, ಅನುವಾದಿಸಿ ಪ್ರಕಟಿಸಿದ್ದಾರೆ. ಅವರ ಜೀವನವೇ ಒಂದು ವಚನವಾಗಿತ್ತು ಎಂದು ಅವರು ಹೇಳಿದರು. ಬಳ್ಳಾರಿಯಲ್ಲಿ ನಡೆದ 12ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಡಾ.ಫ.ಗು. ಹಳಕಟ್ಟಿ ಅವರು ವಚನಗುಮ್ಮಟವೆಂದು ಚಿರಪರಿಚಿತರು ಎಂದು ಅವರು ಹೇಳಿದರು. ಡಾ. ದ.ರಾ. ಬೇಂದ್ರೆ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ, ಈಶ್ವರ ಕಡ್ಲಿಮಟ್ಟಿ, ಬಸವರಾಜ ಕೊಂಗಿ, ಶಿವರಾಜ ಧಾರವಾಡ, ಆರ್.ಜೆ. ಅಕ್ಕಿಹಾಳ, ಸದಾನಂದ ಶಾಂತಪ್ಪ ಹಳಕಟ್ಟಿ ಮತ್ತು ಸುಮುದಾಯದ ಇತರ ಮುಖಂಡರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು, ಆರತಿ ದೇವಶಿಖಾಮಣಿ ನಿರೂಪಿಸಿ, ವಂದಿಸಿದರು

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *