ಧಾರವಾಡ : ಶಕ್ತಿ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರ ಪ್ರಯಾಣ ಸಂಖ್ಯೆ ಹೆಚ್ಚಾದ ಹಿನ್ನಲೆ ವಿದ್ಯಾರ್ಥಿಗಳ ದಿನನಿತ್ಯ ತೊಂದರೆ ಹಾಗುತ್ತಿದೆ. ಧಾರವಾಡ ತಾಲೂಕಿನ ಧಾರವಾಡ, ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧಾರವಾಡ ಹಾರೋಬೆಳವಡಿ ಹಾಗೂ ಇನಾಮಹೊಂಗಲ ಗ್ರಾಮಕ್ಕೆ ಬಸ್ ಸಮಸ್ಯೆ ಇದ್ದು, ವಿಧ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.

ಎರಡು ಬಸ್ ನಲ್ಲಿ ಸಂಚರಿಸುವ ಜನರು ಒಂದೇ ಬಸ್ ನಲ್ಲಿ ಸಂಚಾರ ಮಾಡುವ ಸ್ಥಿತಿ ನಿರ್ಮಾಣವಾಗಿದ್ದು, ಜನರು ಬಸ್ ಚಾಲಕನ ಜೋತೆ ವಾಗ್ವಾದಕ್ಕಿಳಿಯುವ ಪರಿಸ್ಥಿತಿ ಎದುರಾಗುತ್ತಿದೆ. ಸಾರಿಗೆ ಸಂಸ್ಥೆ ಬಸ್ ಚಾಲಕರು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಗಳೊಂದಿಗೆ ಬಸ್ ಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕು, ಇಲ್ಲದೆ ಇದ್ದರೆ ವಿದ್ಯಾರ್ಥೀಗಳ ಭವಿಷ್ಯದ ಜೊತೆಗೆ ಸಾರಿಗೆ ಅಧಿಕಾರಿಗಳು ಆಟವಾಡಿದಂತೆ ಆಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





