ಹುಬ್ಬಳ್ಳಿ: ಪ್ಲಾಸ್ಟಿಕ್ ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿದರೂ ಕೂಡ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಮಾತ್ರ ಎಗ್ಗಿಲ್ಲದೇ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ 8ರ ಸಹಾಯಕ ಆಯುಕ್ತ ಮಲ್ಲಿಕಾರ್ಜುನ ಬಿ.ಎಮ್ ಅವರ ನೇತೃತ್ವದಲ್ಲಿ ವಲಯ ಕಚೇರಿ 8ರ ವಿವಿಧ ಪ್ರದೇಶದಲ್ಲಿ ನಿಷೇಧಿತ ಪ್ಲಾಸ್ಟಿಕ್ ರೆಡ್ ಮಾಡಿ ದಂಡ ವಿಧಿಸಲಾಯಿತು. ಇನ್ನು ಅವಳಿನಗರದಲ್ಲಿ ನಡೆಯುತ್ತಿರುವ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜಿಲ್ಲಾಡಳಿತ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





