ನವಲಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನ ಹಾಗೂ ರೈತರ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಜಾತ್ಯಾತೀತ – ಪಕ್ಷಾತೀತ ಮಹದಾಯಿ ಕಳಸಾ ಬ೦ಡೂರಿ ರೈತ, ಅಸಂಘಟಿತ ಕಾರ್ಮಿಕರ ಮಹಿಳೆಯರ ರೈತ ಹೋರಾಟ ಒಕ್ಕೂಟ ಕೇಂದ್ರ ಸಮಿತಿ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ರೈತ ಮುಖಂಡ ಲೋಕನಾಥ ಹೆಬಸೂರು ಅವರು ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲರ್ಪಣೆ ಮಾಡಿ ಮಾತನಾಡಿ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು. ಮಹದಾಯಿ ಹೋರಾಟಗಾರರ ಮೇಲಿನ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ನಮ್ಮ ಎಲ್ಲ ಬೇಡಿಕೆಗಳನ್ನು ಜು.21 ರೊಳಗೆ ಈಡೇರಿಸಬೇಕು. ಇಲ್ಲದೇ ಹೋದಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





