Breaking News

ಕುಸುಗಲ್ ಗ್ರಾಮದಲ್ಲಿ ಸಮುದಾಯ ಜಾಗೃತೀಕರಣ ಪಾಕ್ಷಿಕ‌ ಕಾರ್ಯಕ್ರಮ

ಹುಬ್ಬಳ್ಳಿ ಸಣ್ಣ ಕುಟುಂಬ ಸುಖಿ ಕುಟುಂಬ, ಗಂಡಿರಲಿ ಹೆಣ್ಣಿರಲಿ ಮಕ್ಕಳೆರಡೇ ಇರಲಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಸೋಫಿಯಾ ಹೇಳಿದರು.ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಸಮುದಾಯ ಜಾಗೃತೀಕರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡು ಸಂತೋಷ ಮತ್ತು ಸಮೃದ್ಧಿಯ ಜೀವನ ಆಯ್ಕೆ ಮಾಡಿಕೊಳ್ಳುತ್ತೇವೆ ಎಂದು ಪ್ರತಿಜ್ಞೆ ಮಾಡೋಣ ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು.ತಾಯಿ ಮಕ್ಕಳ ಆರೋಗ್ಯವನ್ನು ಕಾಪಾಡುವುದು, ಮದುವೆಯ ವಯಸ್ಸು, ಜನನ ನಡುವೆ ಅಂತರ, ಸುರಕ್ಷಿತ ಹೆರಿಗೆ, ಕುಟುಂಬ ಯೋಜನೆ ವಿಧಾನಗಳ ಆಯ್ಕೆಯಲ್ಲಿ ಪುರುಷರ ಸಹಭಾಗಿತ್ವ ಹೆಚ್ಚಿಸುವುದು ಈ ಪಾಕ್ಷಿಕ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಗಿರಿಜವ್ವ ಬೆಂಗೇರಿ, ಪ್ರಾಥಮಿಕ ಸುರಕ್ಷತಾಧಿಕಾರಿಗಳಾದ ಸುನೀತಾ ಉಪ್ಪಾರ, ಸೀಮಾ ಕಲಾಲ, ಮಂಜುಳಾ ಮುದ್ದೇಬಿಹಾಳ, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು ಇತರರು ಹಾಜರಿದ್ದರು.

Share News

About BigTv News

Check Also

ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ..! ಕುತ್ತಿಗೆಗೆ ಸಿಲುಕಿದ ದಾರ, ಲ್ಯಾಬ್ ಟೆಕ್ನಿಷಿಯನ್ ದಾರುಣ ಸಾವು..!

News Audio ಸ್ಕೂಟಿಯಲ್ಲಿ ಲ್ಯಾಬ್‌ಗೆ ತೆರಳುತ್ತಿದ್ದಾಗ ಅವಘಡ | ರಸ್ತೆಯಲ್ಲೇ ತೀವ್ರ ರಕ್ತಸ್ರಾವ, ಮಾಂಜಾ ದಾರದ ಅಪಾಯಕ್ಕೆ ಮತ್ತೊಂದು ಜೀವ …

Leave a Reply

Your email address will not be published. Required fields are marked *