ಬೆಂಗಳೂರು / ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಧಾರವಾಡ ಜಿಲ್ಲೆಯಿಂದ ಹೊರಗಿರುವ ಶಾಸಕ ವಿನಯ್ ಕುಲಕರ್ಣಿಗೆ ನ್ಯಾಯಾಲಯ ಮತ್ತೆ ಶಾಕ್ ನೀಡಿದೆ. ತಾವು ಶಾಸಕರಾಗಿದ್ದು, ಕ್ಷೇತ್ರಕ್ಕೆ ಭೇಟಿ ಕೊಡಬೇಕಾಗಿರುವುದರಿಂದ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಹಾಗೂ ಷರತ್ತುಗಳನ್ನು ಸಡಿಲಿಸಬೇಕು ಎಂದು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು.

ಯೋಗೀಶಗೌಡ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆಯೇ ಇನ್ನೂ ನಡೆದಿಲ್ಲ. ಹೀಗಾಗಿ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನೇ ವಜಾಗೊಳಿಸಿದೆ. ಸಿಬಿಐ ಪರವಾಗಿ ಎಸ್‌ಪಿಪಿ ಗಂಗಾಧರ ಶೆಟ್ಟಿ ಅವರು ಷರತ್ತು ಸಡಿಲಿಕೆ ಮಾಡದಂತೆ ವಾದ ಮಂಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





