ಯಾರೂ ಇಲ್ಲದ ವೇಳೆ ಅಡುಗೆಮನೆ ಸೇರಿಕೊಂಡಿದ್ದ ವಿಷಕಾರಿ ನಾಗರಹಾವಿನಿಂದ ಜೋಡಿ ಬೆಕ್ಕುಗಳು ಇಡೀ ಕುಟುಂಬದ ಸದಸ್ಯರು ರಕ್ಷಿಸಿದ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಘಟನೆ ಜರುಗಿದೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಡಾ.ಅಂಬೇಡ್ಕರ್ ನಗರದಲ್ಲಿ ಲಕ್ಷ್ಮಣ್ ಎಂಬುವರಿಗೆ ಸೇರಿದ ಮನೆಯಲ್ಲಿ ಬುಧವಾರ ನಡೆದಿದ್ದು ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷಕಾರಿ ನಾಗರಹಾವು ಅಡುಗೆಮನೆಗೆ ಸೇರಿದೆ. ಹಾವು ಸೇರಿದ್ದನ್ನು ಮನೆಯಲ್ಲಿ ಇದ್ದ ಜೋಡಿ ಬೆಕ್ಕುಗಳು ನೋಡಿವೆ. ಮನೆ ಮಾಲೀಕರು ಆಗಮಿಸುತ್ತಿದ್ದಂತೆಯೇ ಅಡುಗೆ ಮನೆ ಬಳಿ ಎರಡು ಬೆಕ್ಕುಗಳು ನಿಂತು ಮೆಂವ್….ಮೆಂವ್…ಅಂತ ಅಂದಿವೆ. ಇದರಿಂದಾಗಿ ಮನೆ ಮಾಲೀಕರು ಬೆಕ್ಕುಗಳ ವರ್ತನೆಯಿಂದ ಗಾಬರಿಯಾಗಿ ಕಣ್ಣಾಡಿಸಿದಾಗ ಹಾವು ಇರುವುದು ಗೊತ್ತಾಗಿದೆ.

ತಕ್ಷಣವೇ ಉರಗ ತಜ್ಞ ಸುರೇಬಾನ [ ಸ್ನೇಕ್ ಬುಡ್ಡಾ ] ಅವರನ್ನು ಕರೆಸಿ ನಾಗರಹಾವು ಹಿಡಿಸಿದ್ದಾರೆ. ಅಡುಗೆ ಮನೆಯಲ್ಲಿ ಇದ್ದ ನಾಗರಹಾವು ಖಾಲಿ ಡಬ್ಬಾ ಸೇರುತ್ತಿದ್ದಂತೆಯೇ ಕುಟುಂಬ ಸದಸ್ಯರು ನಿಟ್ಟುಸಿರು ಬಿಟ್ಟರು. ಅಷ್ಟೇ ಅಲ್ಲದೆ ಸೇರೆ ಸಿಕ್ಕ ನಾಗರಹಾವಿಗೆ ವಿಭೂತಿ, ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ನಂತರ ನಾಗರಹಾವು ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ. ನಂತರ ನಾಗರಹಾವಿನಿಂದ ರಕ್ಷಿಸಿದ ಬೆಕ್ಕುಗಳನ್ನು ಕುಟುಂಬ ಸದಸ್ಯರು ಮುದ್ದಾಡಿ ಸಂತಸಪಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news





