ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇಂದು ವಿಶ್ವ ಜನಸಂಖ್ಯಾ ದಿನಾಚರಣೆ ನಿಮಿತ್ತ ಸಮುದಾಯ ಜಾಗೃತಿಕರಣದ ಪಕ್ಷಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಹಾಗೂ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಕಲ್ಯಾಣ ವಿಧಾನಗಳ ಮಾಹಿತಿ ಹಾಗೂ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನರಗುಂದದಲ್ಲಿ ಇಂದು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿಗಳು ಆರೋಗ್ಯ ಶಿಕ್ಷಣಾಧಿಕಾರಿಗಳು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಕ್ಷಯದ ಚಿಕಿತ್ಸಾ ಮೇಲ್ವಿಚಾರಕರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಶಿಕ್ಷಣ ಇಲಾಖೆ ಅಧಿಕಾರಿ ಜಿ.ಬಿ.ಕೊನ್ನೂರ ಅವರು ಸಾರ್ವಜನಿಕರಿಗೆ ಜನಸಂಖ್ಯಾ ನಿಯಂತ್ರಣ ಬಗ್ಗೆ ತಿಳಿಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





