Breaking News

ಕರ್ನಾಟಕ ಬಜೆಟ್‌ ಮದ್ಯ ಪ್ರೀಯರಿಗೆ ಜೇಬಿಗೆ ಕತ್ತರಿ, ಅಬಕಾರಿ ತೆರಿಗೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು ; ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಮೊದಲ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರವು ಅಬಕಾರಿ ತೆರಿಗೆ ಹೆಚ್ಚಿಸಿದೆ. ಹೀಗಾಗಿ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇದರಿಂದ ವಿವಿಧ ಬ್ಯಾಂಡ್‌ಗಳ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಇನ್ನು ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನಲೆ ಮದ್ಯ ಅಬಕಾರಿ ಇಲಾಖೆಯಿಂದ 36000 ಕೋಟಿ ತೆರಿಗ ಸಂಗ್ರಹ ಮಾಡಲು ನಿರ್ಧರಿಸಿದೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *