ಬೆಂಗಳೂರು: 14ನೇ ಬಾರಿಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು ತೋಟಗಾರಿಕೆ ಅಡಿಯಲ್ಲಿ ಉತ್ಪನ್ನ ಹಾಗೂ ಬೆಳೆಗಾರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ರೈತರ ಆದಾಯವನ್ನು ಹೆಚ್ಚಿಸುವಲ್ಲಿ ತೋಟಗಾರಿಕೆ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ ದ್ರಾಕ್ಷಿ, ದಾಳಿಂಬೆ, ಮಾವು ಬೆಳೆ ಹಣ್ಣು ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಿಂ ಹೇಳಿದರು. 2023-24ನೇ ಸಾಲಿನಲ್ಲಿ ಐದು ಕೋಟಿ ವೆಚ್ಚದಲ್ಲಿ. ತೋಟಗಾರಿಕಾ ಉತ್ಪನ್ನಗಳ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗೆ ಎಂಟು ಶೀತಲ ಘಟಕಗಳನ್ನು ನಿರ್ಮಿಸಲಾಗಿದೆ ಎಂದು ಸಿಎಂ ಘೋಷಿಸಿದ್ದಾರೆ. ಅನನ್ಯವಾದ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು ಉತ್ತಮ ಬ್ಯಾಂಡ್ ರುಚಿಯನ್ನು ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಲು ಮತ್ತು ಕಾಫಿ ಎಕೋ ಟೂರಿಸಂನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು ಉI ಟ್ಯಾಗ್‌ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ವಾಣಿಜ್ಯ ಹೂವಿನ ರಫ್ತ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು ಇವುಗಳ ತಳಿಗಳ ಕೊರತೆಯನ್ನು ನಿವಾರಿಸಲು ಆಮದು ಮಾಡಿಕೊಂಡ ರೈತರಿಗೆ ಕೈಗೆಟಕುವ ದರವನ್ನು ಒದಗಿಸಲು ಕ್ರಮವಹಿಸುವುದಲ್ಲದೆ, ತೋಟಗಾರಿಕಾ ಕ್ಷೇತ್ರದ / t ಪ್ರಾಯೋಗಿಕ ಅರಿವು ಮೂಡಿಸಲು ವಿದ್ಯಾರ್ಥಿಗಳಿ, ಪ್ರಾಯೋಗಿಕ ಅರಿವು ಮೂಡಿಸಲು ವಿದ್ಯಾರ್ಥಿಗಳಿಗೆ ತೋಟಗಾರಿಕೆಯನ್ನು ಪರಿಚಯಿಸುವುದಾಗಿ ಸಿಎಂ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





