ಬೆಂಗಳೂರು ; ನಿನ್ನೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುವ ವೇಳೆಯೇ ಅಪರಿಚಿತ ವ್ಯಕ್ತಿಯೊಬ್ಬ ವಿಧಾನಸಭೆ ಒಳ ಪ್ರವೇಶಿಸಿ, ದೇವದುರ್ಗ ಶಾಸಕಿ ಕರೆಮ್ಮ ನಾಯಕ ಅವರ ಸೀಟ್ ನಲ್ಲಿ ಬಂದು ಕುಳಿತಿದ್ದ. ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗುವ ವೇಳೆಯೇ ಶಾಸಕನಲ್ಲದ ವ್ಯಕ್ತಿಯೊಬ್ಬ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರ ಆಸನದಲ್ಲಿ ಬಂದು ಕುಳಿತಿದ್ದಾನೆ. ಇದನ್ನು ಗಮನಿಸಿದ ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ್ ಈ ವಿಷಯವನ್ನು ಕೂಡಲೇ ಸ್ಪೀಕರ್ ಯು.ಟಿ ಖಾದರ್ ಅವರಿಗೆ ತಿಳಿಸಿದ್ದಾರೆ. ನಂತರ ಬಂದ ಭದ್ರಾ ಸಿಬ್ಬಂದಿ, ಅಪರಿಚಿತ ವ್ಯಕ್ತಿಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಾನು ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡು ವಿಧಾನಸಭೆ ಒಳಬಂದಿದ್ದ ಎಂಬ ಮಾಹಿತಿ ದೊರೆತಿದೆ. ತಿಪ್ಪೆರುದ್ರಪ್ಪ ಎಂಬ ವ್ಯಕ್ತಿ ಈ ರೀತಿ ಅಕ್ರಮ ನುಸುಳಿದ ವ್ಯಕ್ತಿಯಾಗಿದ್ದಾನೆ. ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಈ ರೀತಿಯಾಗಿ ಭದ್ರತಾ ವೈಫಲ್ಯ ಆಗಿದೆ. ಇದನ್ನು ಗಂಭೀರವಾಗಿ ಪರಿಣಿಸಿರುವ ಪೊಲೀಸರು ಶಾಸಕರ ಹೆಸರು ದುರ್ಬಳಕೆ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





