Breaking News

ವಿಕಲಚೇತನರನ್ನು ನಿರ್ಲಕ್ಷ್ಯಿಸುವದು ಬೇಡ ಸಂಘದ ಅಧ್ಯಕ್ಷರಿಂದ ಮನವಿ ;

ಗದಗ ಜಿಲ್ಲಾ ನರಗುಂದ ತಾಲ್ಲೂಕಿ ಸರ್ಕಾರಿ ಆಸ್ಪತ್ರೆಯ ಸಭಾ ಭವನದಲ್ಲಿ ಡಾ// ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಯಾವುದೆ ಸರ್ಕಾರ ಬಂದರೂ ವಿಕಲಚೇತನರನ್ನು ನಿರ್ಲಕ್ಷ್ಯಿಸುವುದನ್ನು ಮತ್ತು ಬ್ಯಾಂಕ್ ಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಗಳು ಸಾಲಸೌಲಭ್ಯ ನೀಡದೆ ವಿಕಲಚೇತನರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ಚರ್ಚಿಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ವಿಕಲಚೇತನರಿಗೆ ಸರಕಾರದಿಂದ ಸವಲತ್ತುಗಳನ್ನು ಭ್ರಷ್ಟಾಮುಕ್ತವಾಗಿ ಒದಗಿಸಲು ಹಾಗೂ ವಿಕಲಚೇತನರ ಶ್ರೇಯೋಭಿವೃದ್ಧಿಗೆ ಮುಕ್ತ ಮನಸ್ಸಿನಿಂದ ಎಲ್ಲರೂ ಶ್ರಮಿಸೋಣ ಎಂದು ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ನರಗುಂದ ತಾಲ್ಲೂಕಿನ ಎಲ್ಲ ವಿಕಲಚೇತನರು ಮತ್ತು ವಿಕಲಚೇತನರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *