ಹುಬ್ಬಳ್ಳಿ, ಮಾರ್ಚ್, 15: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಪ್ರಖ್ಯಾತಿ ಆಗಿರುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಸದಾ ಒಂದಲ್ಲ ಒಂದು ಯಡವಟ್ಟು ಮಾಡಿಕೊಂಡು ಸುದ್ದಿಯಲ್ಲಿರುತ್ತದೆ. ವಾರ್ಡ್‌ಗಳಲ್ಲಿ ರೋಗಿಗಳನ್ನು ಕೆಳಮಟ್ಟದಲ್ಲಿ ನೋಡಿಕೊಳ್ಳಲಾಗುತ್ತಿದ್ದು, ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಡರೋಗಿಗಳು ನರಳಾಡುವಂತಾಗಿದೆ.ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ರೋಗಿಗಳು ನಿತ್ಯ ನರಕದರ್ಶನ ಅನುಭವಿಸುವಂತಾಗಿದೆ. ಮೊನ್ನೆ ನೆಲದ ಮೇಲೆ ವೃದ್ಧೆಗೆ ಚಿಕಿತ್ಸೆ ನೀಡಿ ಸುದ್ದಿಯಾಗಿದ್ದ ಕಿಮ್ಸ್ ಆಡಳಿತ ಮಂಡಳಿ, ಇದೀಗ ಮತ್ತೆ ಅಂತಹದ್ದೇ ತಪ್ಪು ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಇಬ್ಬರು ಮಹಿಳೆಯರು ಒಂದೇ ಬೆಡ್ ಮೇಲೆ ಮಲಗಿ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದ ವಿಡಿಯೋ ಈಗ ವೈರಲ್ ಆಗಿದೆ. ಕಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಕಾರ್ಯವೈಖರಿಗೆ ಜನ ಬೇಸರ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಒಳ್ಳೆಯ ಚಿಕಿತ್ಸೆ ಇದ್ದರೂ ಕಿಮ್ಸ್ ಆಸ್ಪತ್ರೆಗೆ ಕೆಟ್ಟ ಹೆಸರು ಬರುತ್ತಿದೆ. ಹೀಗೆ ಬಡರೋಗಿಗಳ ಜೊತೆಗೆ ಚೆಲ್ಲಾಟವಾಡುತ್ತಿರುವ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಾಬೇಕಾಗಿದೆ ಎನ್ನುವುದು ಇಲ್ಲಿನ ಜನರ ಆಶಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





