Breaking News

ಜೈನ್ ಮುನಿಗಳಿಗೆ ರಕ್ಷಣೆಯೇ ಇಲ್ಲ: ನ್ಯಾಯ ಸಿಗುವವರೆಗೂ ಸಲ್ಲೇಖನ ವೃತವೆಂದು ಕಣ್ಣೀರು…!

ಹುಬ್ಬಳ್ಳಿ: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ ಹಾಗೂ ಜೈನ್ ಮುನಿಗಳಿಗೆ ಆತಂಕವನ್ನುಂಟು ಮಾಡಿದೆ ಎಂದರು.ಶಾಂತಿಪ್ರಿಯ ಸಮಾಜದ ಸ್ವಾಮೀಜಿಯ ಬರ್ಬರ ಹತ್ಯೆ ತೀವ್ರ ನೋವು ತಂದಿದೆ. ಸಿ.ಎಮ್. ಇದುವರೆಗೂ ಸಂತಾಪ ಸೂಚಿಸದಿರುವುದು ಆಘಾತವಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಬೇಕು‌. ಸರ್ಕಾರಕ್ಕೆ ನಮ್ಮಂತ ಅಲ್ಪಸಂಖ್ಯಾತರು ಬೇಡವಾಗಿದೆ. ಜೈನ ಮುನಿಗಳಿಗೆ ಸೂಕ್ತ ರಕ್ಷಣೆ ಕೊಡಬೇಕು, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು ಎಂದು ಗಳಗಳನೆ ಕಣ್ಣೀರು ಸುರಿಸಿದ ಜೈನಮುನಿ ಗುಣಧರನಂದಿ ಮಹಾರಾಜರು ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರ ಲಿಖಿತ ಭರವಸೆ ಕೊಡುವವರೆಗೆ ಅನ್ನಾಹಾರ ತ್ಯಾಗ ಮಾಡುತ್ತೇನೆ. ಪ್ರಾಣ ಹೋಗುವವರೆಗೆ ಸಲ್ಲೇಖ‌ನ ಮಾಡುತ್ತೇನೆ ಎಂದು ಅವರು ಹೇಳಿದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *