ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆಯೊಂದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದಿದ್ದು, ಯುವಕನ ಮೇಲೆ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಹೌದು..ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು
ಮೊಬೈಲ್ ನಲ್ಲಿ ಸೆರೆ ಹಿಡಿದ ದುಷ್ಕರ್ಮಿಗಳು. ಮೊಬೈಲ್ ನಲ್ಲಿ ಸೆರೆಯಾದ ದೃಶ್ಯ ವೈರಲ್ ಮಾಡಿ ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಸೆರೆಯಾದ
ಹಲ್ಲೆಯ ದೃಶ್ಯದಲ್ಲಿ ಕೆಲವರು ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿದ್ದಾರೆ. ಇನ್ ಸ್ಟಾಗ್ರಾಂ ಇನ್ ಬಾಕ್ಸ್ ನಲ್ಲಿ ಬೈಯ್ದು ಮೆಸೆಜ್ ಹಾಕಿದ್ದ ಅನ್ನೊ ಕಾರಣಕ್ಕೆ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಳುತ್ತಾ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ಬಿಡದ ಕಿರಾತಕರು ಬೆತ್ತಲೆ ಮಾಡಿ ಹಲ್ಲೆ ಮಾಡಿದ್ದಾರೆ.ಇನ್ನೂ ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲೇ ನಡೆದಿದೆ ಎನ್ನಲಾಗಿರುವ ಘಟನೆಯಲ್ಲಿ ಪುಡಿರೌಡಿಗಳ ಹಾವಳಿ ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

