Breaking News

ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಕಾನೂನು ಕ್ರಮ: ಕಮೀಷನರ್ ಸಂತೋಷ ಬಾಬು..!

ಹುಬ್ಬಳ್ಳಿ: ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ಎರಡು ವಿಡಿಯೋ ಮೂಲಕ ನಮ್ಮ ಗಮನಕ್ಕೆ ಬಂದಿದೆ. ಈಗಾಗಲೇ ಐದು ಜನ ಆರೋಪಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ ಯಾರೇ ಕೃತ್ಯದಲ್ಲಿ ಭಾಗಿಯಾಗಿದ್ದರೂ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ

ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಸಂತೋಶ್ ಬಾಬು ಹೇಳಿದರು.ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ ವಿಚಾರಣೆ ಬಳಿಕ ಮಾಧ್ಯಮದ ಜೊತೆಗೆ

ಮಾತನಾಡಿದ ಅವರು, ವಿಡಿಯೋದಲ್ಲಿ ಇರುವವರ ಹೆಸರು ಸಂದೀಪ್. ಸಂದೀಪ್ ಇನ್ ಸ್ಟಾಗ್ರಾಂನಲ್ಲಿ ಕೆಟ್ಟದಾಗಿ ಬೈತಿದ್ದ. ಈ ಹಿನ್ನೆಲೆಯಲ್ಲಿ ಘಟನೆ ನಡೆದಿದೆ. ಇದುವೆರಗೂ ಸಂದೀಪ್ ದೂರು ಕೊಟ್ಟಿಲ್ಲ. ಮೂರು ನಾಲ್ಕು ತಿಂಗಳ ಹಿಂದೆ ನಡೆದ ಘಟನೆ‌ಯಾಗಿದ್ದು, ಇಂದು ನಮ್ಮ ಗಮನಕ್ಕೆ ಬಂದಿದೆ ಎಂದರು.ಹುಬ್ಬಳ್ಳಿಯ ಸೆಟ್ಲಮೆಂಟ್ ನಲ್ಲಿ ನಡೆದ ಘಟನೆ

ಎನ್ನುವ ಅನುಮಾನ ಇದೆ. ಪೊಲೀಸರು ಈ ತರಹದ ಘಟನೆ ಆಗುವ ಮುಂಚೆ ಎಚ್ಚೆತ್ತಕೊಳ್ಳಬೇಕಿತ್ತು. ಆದರೆ ವಿಡಿಯೋ ಇಂದು ಬಹಿರಂಗವಾಗಿರುವ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿ ತನಿಖೆ ಮಾಡುತ್ತಿದ್ದೇವೆ. ಒಟ್ಟು ಐದು ಜನರನ್ನು ವಶಕ್ಕೆ ಪಡೆಯಲಾಗಿದೆ.‌ ವಿಡಿಯೋದಲ್ಲಿ ಇರುವ ಸಂದೀಪ್ ಗಾಗಿ ಹುಡುಕಾಡುತ್ತಿದ್ದೇವೆ ಎಂದು ಅವರು ಹೇಳಿದರು.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್, ವಿನಾಯಕ್,ಗಣೇಶ್,ಸಚಿನ್ ,ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಯಾರೇ ಇದ್ದರೂ ಕೂಡ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ. ಅಲ್ಲದೇ ಸಂದೀಪ್ ನನ್ನು ಪತ್ತೆ ಮಾಡಿ ಪ್ರಕರಣ ಕೂಡ ದಾಖಲಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸುತ್ತೇವೆ ಎಂದು ಭರವಸೆ ನೀಡಿದರು…

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *